ನಿನ್ನ ಕಂಗಳುಬಾನೊಳು
ಹುಣ್ಣಿಮೆಯ ಚಂದ್ರನಂತೆ
ಅಲ್ಲೇ ಪಕ್ಕದಲ್ಲಿನಗುತ್ತಿವೆ ಚುಕ್ಕಿಗಳಂತೆ
ಸುತ್ತೆಲ್ಲ ಬೆಳದಿಂಗಳ ಹಬ್ಬವಂತೆ
ಇಲ್ಲಿ ಮಿಂಚು ಹುಳುಗಳು
ದೀಪ ಹಿಡಿದು ಹಾರುತ್ತಿವೆಯಂತೆ
ಹಾಗೆನ್ನುತ್ತಿದ್ದಾರೆ ಜನರೆಲ್ಲ
ನನಗೆ ಇದ್ಯಾವ ಕುರುಡುತನ!
ಹಾಂ! ಗೊತ್ತಾಯ್ತು ಬಿಡುನಿನ್ನ ಜೋಡಿ
ಕಂಗಳಿಲ್ಲಿ ಇಲ್ಲ ನೋಡು
ಅದಕೆ ಬರಿಯ ಕತ್ತಲುನಿನ್ನ ಒಂದು ನೋಟ
ಸಾಕುಬಾಳ ದೀಪ ಬೆಳಗಲು........................
Tuesday, February 19, 2008
Subscribe to:
Post Comments (Atom)
No comments:
Post a Comment